ಬಳ್ಳಾರಿ,ಏ.17: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಸೋಮವಾರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿಂದ ಒಟ್ಟು 12 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
91-ಕಂಪ್ಲಿ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಎಸ್ಯುಸಿಐ (ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ) ಪಕ್ಷದ ಅಭ್ಯರ್ಥಿಯಾಗಿ ಎ.ದೇವದಾಸು ಅವರು ನಾಮಪತ್ರ ಸಲ್ಲಿಸಿದ್ದಾರೆ.
92-ಸಿರುಗುಪ್ಪ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ನಾಗರಾಜ ಅವರು ಎರಡು ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಅಭ್ಯರ್ಥಿಯಾಗಿ ದೊಡ್ಡಯಲ್ಲಪ್ಪ ಮತ್ತು ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಹಳ್ಳಿಮರದ ವೀರೇಶ ಅವರು ನಾಮಪತ್ರ ಸಲ್ಲಿಸಿದ್ದಾರೆ.
93-ಬಳ್ಳಾರಿ ಗ್ರಾಮೀಣ ವಿಧಾನಸಭಾ (ಪ.ಪಂ) ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ನಾಗೇಂದ್ರ ಅವರು ನಾಮಪತ್ರ ಸಲ್ಲಿಸಿದ್ದಾರೆ.
94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಿ ಅರುಣ.ಜಿ ಅವರು ಎರಡು ನಾಮಪತ್ರ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಅಶೋಕ ಕುಮಾರ ರೆಡ್ಡಿ.ಪಿ.ವಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
95-ಸಂಡೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿಲ್ಪಾ ಪಾಟೀಲ್, ಕೆಆರ್ಎಸ್ (ಕರ್ನಾಟಕ ರಾಷ್ಟ್ರ ಸಮಿತಿ) ಪಕ್ಷದ ಅಭ್ಯರ್ಥಿಯಾಗಿ ವೇಬಾ ಕುಮಾರಿ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಸ್.ದಿವಾಕರ ಅವರು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏ. 20 ಕೊನೆ ದಿನವಾಗಿದ್ದು, ಏ. 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಮಾಲಪಾಟಿ ಅವರು ತಿಳಿಸಿದ್ದಾರೆ.
——–