ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಶೇ. 4 ರಷ್ಟು‌ ಹೆಚ್ಚಳ -ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 30:ರಾಜ್ಯ ಸರಕಾರಿ ನೌಕರರಿಗೆ ಇದೇ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ. 4 ರಷ್ಟು
ತುಟ್ಟಿಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

—–