ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬಾಗಲಕೋಟೆಯ ಸಪ್ನಾ‌ ಅನಿಗೋಳ ಆಯ್ಕೆ: ಜಿಲ್ಲೆಯಾದ್ಯಂತ ಹರ್ಷ

ಬಾಗಲಕೋಟೆ, ಆ.27: ಕೇಂದ್ರ ಸರಕಾರದ 2023ನೇ ಸಾಲಿನ  ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಜಿಲ್ಲೆಯ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಲಭಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶೈಕ್ಷಣಿಕ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.
ನವದೆಹಲಿಯಲ್ಲಿ ಸೆ. 5ರಂದು ಜರುಗಲಿರುವ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ‌ ಮಾಡಲಾಗುವುದು.
ಸಪ್ನಾ ಅವರು  ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಎಂ.ಎಸ್ಸಿ. ಬಿ.ಇಡಿ ಪದವಿಧರರಾದ ಅನಿಗೋಳ ಅವರು ಕಳೆದ 19 ವರ್ಷಗಳಿಂದ ಪಟ್ಟಣದ ಮಹಾಲಿಂಗಪುರದ ಎಸ್‌ಸಿಪಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಆಧುನಿಕತೆಗೆ ತಕ್ಕಂತೆ ಹೊಸ ಬೋಧನಾ ಕೌಶಲ್ಯಗಳನ್ನು ಅಳವಡಿಸಿಕೊಂಡು ಸ್ಮಾರ್ಟಕ್ಲಾಸ್, ಶೈಕ್ಷಷಿಕ ಆ್ಯಪ್, ಕಂಪ್ಯೂಟರ್ ಬಳಕೆ ಮಾಡಿಕೊಂಡು ಅತ್ಯಂತ ಕಠಿಣ ವಿಷಯಗಳನ್ನು ಮಕ್ಕಳ ಮನಮುಟ್ಟುವಂತೆ ತಿಳಿಸುತ್ತಾ ಸಾವಿರಾರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ವಿಜ್ಞಾನ ಶಿಕ್ಷಕಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ (2021) ಸಪ್ಮಾ ಅವರಿಗೆ ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿದ್ದರು.
ಅಭಿನಂದನೆ: ಪ್ರಸಕ್ತಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜರಾದ ಸಪ್ನಾ ಅನಿಗೋಳ ಅವರನ್ನು ದಕ್ಷಿಣ ಕನ್ನಡದ ಪ್ರತಿಭಾವಂತ ಅಧ್ಯಾಪಕ, ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕುಬ್ ಕೊಯೂರ್, ಗುಲ್ಬರ್ಗಾ ವಿಶ್ವ ವಿದ್ಯಾಲಯದ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಬಳ್ಳಾರಿಯ ಸಿ.ಮಂಜುನಾಥ್ ಅವರು  ಅಭಿನಂದಿಸಿದ್ದಾರೆ.
—–