ಬಳ್ಳಾರಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಗುರುಶಿಷ್ಯ ಪರಂಪರೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ. ರಂಗಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮದಡಿ ಜಾನಪದ ಕಲಾಪ್ರಕಾರಗಳಾದ ಗೀಗಿಪದ, ಡೊಳ್ಳು, ತಮಟೆ ಮುಂತಾದವು ಹಾಗೂ ಕರ್ನಾಟಕ / ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಗಮಕ, ನೃತ್ಯ, ಕಥಾ ಕೀರ್ತನೆ ಇವುಗಳಲ್ಲಿ ಆಯಾ ಯೋಜನೆಯಡಿ ಯಾವುದಾದರೂ ಒಂದು ಕಲಾ ಪ್ರಕಾರವನ್ನು ಆಯ್ಕೆಮಾಡಿಕೊಂಡು ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದೊಳಗಿನವರಾಗಿರಬೇಕು. ಆಸಕ್ತರು ಅರ್ಜಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳಾದ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಯಸ್ಸಿನ ದಾಖಲಾತಿಗಳೊಂದಿಗೆ ಡಿ.1ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ. ಡಾ.ರಾಜ್ಕುಮಾರ್ ರಸ್ತೆ, ಬಳ್ಳಾರಿ ಕಚೇರಿಗೆ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08392-275182ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.