ಬಳ್ಳಾರಿ: ಸಾರ್ವಜನಿಕರಲ್ಲಿ ಸಕಾಲ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಸೋಮವಾರದಿಂದ ಡಿ. 5 ವರೆಗೆ ಹಮ್ಮಿಕೊಂಡಿರುವ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಸ್ .ಎಸ್.ನಕುಲ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಪರೆನ್ಸ್ ಮುಖಾಂತರ ಚಾಲನೆ ನೀಡಿ ಮಾತನಾಡಿದ ಅವರು ಮೊದನ ಹಂತದಲ್ಲಿ ನಗರಾಭಿವೃದ್ದಿ, ಕಂದಾಯ, ಸಾರಿಗೆ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಸಕಾಲ ಸಪ್ತಾಹ ನಡೆಯಲಿದೆ.
ಈ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಸೇವೆಯನ್ನು ಒದಗಿಸುವ ಕೆಲಸವಾಗಬೇಕು. ಅರ್ಜಿ ಸ್ವೀಕೃತಿಯಾದ ನಂತರ ವಿಲೇವಾರಿಯಲ್ಲಿ ಅಧಿಕಾರಿಗಳು ಮಹತ್ವದ ಪಾತ್ರವಹಿಸಬೇಕು. ಸಂಪೂರ್ಣ ಮಾಹಿತಿಯನ್ನೊಳಗೊಂಡ ಮಾಹಿತಿ ಫಲಕಗಳನ್ನು ಹಾಕಲು ಡಿಸಿ ಅವರು ಸೂಚಿಸಿದರು.
ಈಗಾಗಲೇ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿ ಉಳಿದಿರುವ ಅರ್ಜಿ, ಮೇಲ್ಮನವಿಗಳನ್ನು ವಿಲೇವಾರಿ ಮಾಡುವುದು ಹಾಗೂ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಸಕಾಲದಡಿ ನಿಗದಿಪಡಿಸಲಾದ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಸೇವೆಗಳ ಹಕ್ಕು ಪಡೆಯಲು ಬಂದ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಅರ್ಜಿ ಸ್ವೀಕರಿಸಿದ ನಂತರ ಅರ್ಜಿ ಯಾವ ಹಂತದಲ್ಲಿದೆ, ಎಷ್ಟು ದಿನಗಳಲ್ಲಿ ಸೇವೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯ ಅರಿವು ಮೂಡಿಸಿ ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡುವ ಮೂಲಕ ಸಪ್ತಾಹ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ನೋಡಲ್ ಅಧಿಕಾರಿಗಳ ನೇಮಕ: ಜಿಲ್ಲೆಯಾದ್ಯಂತ ನ. 30 ರಿಂದ ಡಿ.5 ವರೆಗೆ ಹಮ್ಮಿಕೊಂಡ ಸಕಾಲ ಸಪ್ತಾಹ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ.
ಕಂದಾಯ ಇಲಾಖೆಗೆ ಬಳ್ಳಾರಿ ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ, ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಜಂಟಿ ನಿರ್ದೇಶಕ ಶ್ರೀಧರ್, ಸಾರಿಗೆ ಇಲಾಖೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶೇಖರ್, ನಗರಾಭಿವೃದ್ಧಿ ಕೋಶಕ್ಕೆ ಡಿಯುಡಿಸಿ ಯೋಜನಾ ನಿರ್ದೇಶಕ ರಮೇಶ ಅವರನ್ನು ನೇಮಿಸಲಾಗಿದೆ. ಪ್ರತಿ ನೋಡಲ್ ಅಧಿಕಾರಿಗಳೊಂದಿಗೆ ಮೂರು ಜನ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಂಡದ ಸದಸ್ಯರನ್ನಾಗಿ ನೇಮಿಸಲಾಗಿದೆ.
ಸಕಾಲ ಸಪ್ತಾಹದ ಉದ್ದೇಶದ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಬೇಕು.ಸಕಾಲ ಮಿಶನ್ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ,ಪ್ರಚುರಪಡಿಸಬೇಕು. ಕಚೇರಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ನಿಗದಿತ ಪ್ರಶ್ನಾವಳಿ ರೂಪದಲ್ಲಿ ಸಾರ್ವಜನಿಕರಿಂದ ಮಾಹಿತಿ ಪಡೆಯಬೇಕು ಎಂದು ಅವರು ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.