ಬಳ್ಳಾರಿ, ಜ. ೧೦: ವಿದ್ಯಾರ್ಥಿಗಳ ಪ್ರತಿಭೆಗೆ ಪುರಸ್ಕಾರ ದೊರೆತರೆ ಅವರ ಸಾಧನೆಗೆ ಮತ್ತಷ್ಟು ಉತ್ತೇಜನ ದೊರೆಯುತ್ತದೆ ಎಂದು ಶಾಲಾ ಶಿಕ್ಷಣ( ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಟಿ ಪಾಲಾಕ್ಷ ಅವರು ಹೇಳಿದರು.
ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘವು ನಗರದ ಎ.ಎಸ್ ಎಂ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಜತೆಗೆ ಸುಮಾರು ೩೦ -೩೫ ವರ್ಷಗಳ ಕಾಲ ಇಲಾಖೆಯಲ್ಲಿ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕರಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಚೆನ್ನಾಗಿ ಓದಿ ಈ ವರ್ಷ ಬಳ್ಳಾರಿ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ರಾಷ್ಟ್ರಮಟ್ಡದ ಕ್ರೀಡೆಗಳಲ್ಲಿ ಹಾಗೂ ರಾಜ್ಯಮಟ್ಡದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಣನೀಯ ಸಾದನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಸುಮಾರು ೩೦ ಜನ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ನಿವೃತ್ತ ಉಪನಿರ್ದೇಶಕರಾದ ಬಿ ನಾಗರಾಜಪ್ಪ ಬಿ ವೀರೇಶಪ್ಪ ನಾಗಭೂಷಣ್ ಇವರು ತಮ್ಮ ಸೇವಾ ಅನುಭವಗಳನ್ನು ಹಂಚಿಕೊಂಡರು .ಬಳ್ಳಾರಿ ಜಿಲ್ಲಾ ಪ್ರಾಚಾರ್ಯರ ಸಂಘದ ಅದ್ಯಕ್ಷ ಎಂ ಶ್ರೀಶ್ರೈಲ ಇವರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಸಣ್ಣ ಶಿವರಾಂ ಅವರು ಪ್ರಾಸ್ತಾವಿಕ ನುಡಿಯನ್ನಾಡಿದರು ಎ.ಎಸ್ ಎಂ ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದರಾಜು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎ.ಎಸ್ಎಂ ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷರಾದ ಶ್ರೀಮತಿ ಕುಪ್ಪಗಲ್ ಗಿರಿಜಾ, ಶ್ರೀ ಚೈತನ್ಯ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ ರಾಧಾಕೃಷ್ಣ , ಉಪನ್ಯಾಸಕರ ಸಂಘದ ಜಿಲ್ಲಾ ಅದ್ಯಕ್ಷ ಡಾ.ರಾಜಣ್ಣ ,ಪ್ರಾಚಾರ್ಯರ ಸಂಘದ ಗೌರವಾದ್ಯಕ್ಷ ವಿಕ್ಟರ್ ಇಮ್ಯಾನ್ಯುಯಲ್ ,ಪ್ರಾಚಾರ್ಯ ವೆಂಕಟರೆಡ್ಡಿ, ತಾಲೂಕು ಉಪನ್ಯಾಸಕರ ಸಂಘದ ಅದ್ಯಕ್ಷ ಕಲ್ಲಪ್ಪ, ಭೋದಕೇತರ ಸಂಘದ ಅದ್ಯಕ್ಷ ಮದ್ದಿಕೇರಪ್ಪ ಮುಂತಾದವರು ಉಪಸ್ಥಿತರಿದ್ದರು. ಎ.ಎಸ್. ಎಮ್ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕ ಅಲೆಕ್ಝಾಂಡರ್ ವಂದಿಸಿದರು ರಾಷ್ಟ್ರ ಮಟ್ಟದ ಕ್ರೀಡಾ ಸಾಧಕರ ವರದಿಯನ್ನು ಆಂಗ್ಲ ಉಪನ್ಯಾಸಕ ಹರ್ಷ ಡ್ಯಾನ್ಯುಯಲ್ ವಾಚಿಸಿದರು. ಕನ್ನಡ ಉಪನ್ಯಾಸಕ ಎ.ಎಂ.ಪಿ ವೀರೇಶಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.
—–