ಡಾ. ಬಿ ಆರ್ ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಫೆ.14:ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಏ.05 ರಂದು ರಂದು ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮ ದಿನಾಚರಣೆ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ನಗರದ ಕೌಲ್ ಬಜಾರ್‌ನ 1ನೇ ಗೇಟ್‌ನ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ.25 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9480843073 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————