ಬಳ್ಳಾರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರರಾಗಿ ಇಲ್ಲಿನ ಬಾಪೂಜಿ ನಗರದ ನ್ಯಾಯವಾದಿ, ವೆಂಕಟೇಶ್ ಹೆಗಡೆ ಅವರನ್ನು ನೇಮಿಸಲಾಗಿದೆ.
ಈ ಕುರಿತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಗರ, ಜಿಲ್ಲಾ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಪದಾಧಿಕಾರಿಗಳಾಗಿ ವೆಂಕಟೇಶ್ ಅವರು ಕಾರ್ಯನಿರ್ವಹಿಸಿದ್ದಾರೆ.
ಬಳ್ಳಾರಿಯ ವಿ ಎಸ್ ಕೆ ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿಯೂ ಸೇವೆ ಸಲ್ಕಿಸಿದ್ದಾರೆ.
ಕರ್ನಾಟಕ ಕಹಳೆ ಡಾಟ್ ಕಾಮ್ ಜತೆ ಮಾತನಾಡಿದ ಹೆಗಡೆ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಬಲಪಡಿಸಲು ತಮ್ನ ಸಾಮರ್ಥ್ಯ ಮೀರಿ ಪ್ರಯತ್ನಿಸುವುದಾಗಿ ಹೇಳಿದರು.