ಬಳ್ಳಾರಿ: ಕರ್ನಾಟಕ ಸರಕಾರದ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಅವರು ಶುಕ್ರವಾರ ನಗರದ ಎಪಿಎಂಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್,ಎಪಿಎಂಸಿ ಕಾರ್ಯದರ್ಶಿ ಮೋಹನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಶ್ರೀಧರ್, ಎಪಿಎಂಸಿ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು