ಜವಾಹಾರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ: ಅವಧಿ ವಿಸ್ತರಣೆ

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿನಹಳ್ಳಿಯಲ್ಲಿರುವ ಜವಾಹಾರ ನವೋದಯ ವಿದ್ಯಾಲಯದಲ್ಲಿ 2020–21 ನೇ ಸಾಲಿನ 6ನೇ ಹಾಗೂ 9ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ ಎಂದು ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ನೇ ತರಗತಿ ಪ್ರವೇಶಕ್ಕೆ ಡಿ.29 ರಂದು ಮತ್ತು 9ನೇ ತರಗತಿ ಪ್ರವೇಶ್ಕಕೆ ಡಿ.31 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಪ್ರವೇಶ ಪಡೆದವರು ಏನಾದರೂ ಬದಲಾವಣೆಗಳು ಇದ್ದಲ್ಲಿ ನವೋದಯ ವಿದ್ಯಾಲಯದ ವೆಬ್‌ಸೈಟ್‌ನಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿ ಕಚೇರಿಯ ದೂ.ಸಂ.08391-223237 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
*-*-*