ಗ್ರಾಪಂ ಚುನಾವಣೆ : ಮತಗಟ್ಟೆ ಕೇಂದ್ರಗಳ ಸುತ್ತಲೂ 100 ಮೀಟರ್ ನಿಷೇಧಾಜ್ಞೆ ಜಾರಿ

ಬಳ್ಳಾರಿ: ಗ್ರಾಪಂ ಸಾರ್ವತ್ರಿಕ ಚುನಾವಣೆಯು ಇದೇ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯುವ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಅವರು ಆದೇಶ ಹೊರಡಿಸಿದ್ದಾರೆ.
ಸಿಆರ್‌ಪಿಸಿ ಕಾಯ್ದೆ 1973 ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಡಿ.22 ಮತ್ತು 27 ರಂದು ನಡೆಯುವ ಗ್ರಾಪಂ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆ ಕೇಂದ್ರಗಳ ಸೂಕ್ತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಮತಗಟ್ಟೆಗಳ ಸುತ್ತಲೂ 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಆದೇಶಿಸಿದ್ದಾರೆ.
*****