ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಬೆಳಗಾವಿಯಲ್ಲಿ ಉಪಮುಖ್ಯಂತ್ರಿ ಸವದಿ ಅವರಿಂದ ರೈತರಿಗೆ ಸನ್ಮಾನ

ಬೆಳಗಾವಿ: ಉಪ ಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ನಗರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ರೈತರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಿಗೆ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ್ ಪಾಟೀಲ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.