ಡಿ.27ರಂದು 2ನೇ ಹಂತದ ಗ್ರಾಪಂ ಚುನಾವಣೆ, ಮತಗಟ್ಟೆ ಕೇಂದ್ರಗಳ ಸುತ್ತಮುತ್ತ ನಿಷೇದಾಜ್ಞೆ ಜಾರಿ: ಡಿಸಿ ನಕುಲ್

ಬಳ್ಳಾರಿ: ಜಿಲ್ಲೆಯಲ್ಲಿ 6 ತಾಲೂಕುಗಳಲ್ಲಿ ಎರಡನೇ ಹಂತದ ಗ್ರಾಪಂ ಚುನಾವಣೆ ಡಿ.27ರಂದು ನಡೆಯಲಿದ್ದು, ಚುನಾವಣೆ ನಡೆಯುವ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮೊಬೈಲ್,ಸ್ಮಾರ್ಟ್ ವಾಚ್ ಹಾಗೂ ಇತರೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಉಪಯೊಗಿಸದಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ.
ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ಕೇವಲ ಮತಗಟ್ಟೆ ಅಧಿಕಾರಿಗಳು ಹೊರತುಪಡಿಸಿ ಅಭ್ಯರ್ಥಿಗಳು,ಏಜೆಂಟರು/ಸಾರ್ವಜನಿಕರು ಮತಗಟ್ಟೆಯ 100 ಮೀಟರ್ ಸುತ್ತಮುತ್ತ ಮೊಬೈಲ್,ಸ್ಮಾರ್ಟ್ ವಾಚ್ ಹಾಗೂ ಇತರೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.