ಬಳ್ಳಾರಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.
ಸಂಡೂರು ತಾಲೂಕಿನ ವಡ್ಡು ಗ್ರಾಮದ ಮತಗಟ್ಟೆಯಲ್ಲಿ ಮೊದಲ ಬಾರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ತೇಜಸ್ವಿನಿ ಮತ್ತು ರಿಯಾ ತಿವಾರಿ ಸಂಭ್ರಮದಲ್ಲಿದ್ದರು.
ತೋರಣಗಲ್ಲು ಗ್ರಾಮದಲ್ಲಿ 80ವರ್ಷದ ಹುಸೇನಾಬೀ ಹೆಚ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮದ ಮತಗಟ್ಟೆಗಳಿಗೆ ಮತದಾರರು ತೆರಳಿ ಸಾಲಾಗಿ ನಿಂತು ಮತ ಚಲಾಯಿಸುತ್ತಿದ್ದಾರೆ.