ಇಂದು(ಡಿ.31) ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ

ಬಳ್ಳಾರಿ: ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುವ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆ ಗುರುವಾರ(ಡಿ.31) ಶ್ರೀ ವಾಲ್ಮೀಕಿ ಭವನದ ಬಳಿ ಇರುವ ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ ಬೆ. 10 ಗಂಟೆಗೆ ನಡೆಯಲಿದೆ.
ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೇರಿದಂತೆ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಪ್ರಾಣಿ ಪ್ರಿಯ ಸಂಘದ(ಎನ್.ಜಿ.ಓ)ಸದಸ್ಯರು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿಯಾಗಿರುವ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ‌ ಸಭೆ ನಿಗದಿಯಾಗಿದ್ದು, ಗುರುವಾರ ಬೆಳಿಗ್ಗೆ ನಿರ್ಮಿತಿ ಕೇಂದ್ರದ ಸಭಾಂಗಣಕ್ಕೆ ಬದಲಾಗಿದೆ ಎಂದು ಮೂಲಗಳು ತಿಳಿಸಿವೆ.