ಬೆಂಗಳೂರು: ಅನಾರೋಗ್ಯದಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಡಿ. ವಿ.ಸದಾನಂದ ಗೌಡ ಅವರನ್ನು ಸೋಮವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭೇಟಿ ಮಾಡಿ ಆರೋಗ್ಯದ ಕುರಿತು ವಿಚಾರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜತೆ ಉಪಸ್ಥಿತರಿದ್ದ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ ಮತ್ತಿತರ ಸಚಿವರು ಸದಾನಂದ ಗೌಡರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.