ಬೆಂಗಳೂರು: ಹುತಾತ್ಮರ ದಿನದ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗೆ ಗೌರವ ಸಮರ್ಪಿಸಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆಯಲ್ಲಿ ಪಾಲ್ಗೊಂಡು, ನಂತರ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರುಗಳಾದ ಆರ್.ಅಶೋಕ್, ಎಸ್.ಸುರೇಶ್ ಕುಮಾರ್, ಬಿ.ಎ.ಬಸವರಾಜ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.