ಬಳ್ಳಾರಿ: ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು (ಕರ್ನಾಟಕ ಪಬ್ಲಿಕ್ ಶಾಲೆ)ಯಲ್ಲಿ ಶನಿವಾರ ಬೆಳಿಗ್ಗೆ 10.30 ಕ್ಕೆ ರಂಗಭೂಮಿಗೆ ಮಹಿಳೆಯರ ಕೊಡುಗೆ ಕುರಿತ ವಿಚಾರ ಸಂಕಿರಣ ಹಮ್ಮಿಕೊಂಡಿದೆ.
ಕಾರ್ಯಕ್ರಮವನ್ನು ಹಂದ್ಯಾಳ್ ಮಹಾದೇವ ತಾತ ಕಲಾ ಸಂಘ ಆಯೋಜಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕಾಲೇಜಿನ ಪ್ರಾಂಶುಪಾಲ ಕೆ.ಎಂ.ಮಹಾಲಿಂಗನಗೌಡ ಅವರು ಅಧ್ಯಕ್ಷತೆ ವಹಿಸುವರು.
ಉಪನ್ಯಾಸಕಿ ಡಾ.ಎ.ಎಸ್.ಸಿದ್ದೇಶ್ವರಿ ಅವರು ವಿಷಯ ಮಂಡಿಸುವರು.
ಮುಖ್ಯ ಅಥಿತಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ. ರಂಗಣ್ಣನವರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಕಲಾವಿದೆಯರಾದ ವೀಣಾಕುಮಾರಿ , ಉಮಾರಾಣಿ ಇಳಕಲ್ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಅವರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಕಾರ್ಯಕ್ರಮ ಆಯೋಜಕ, ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳು ತಿಳಿಸಿದ್ದಾರೆ.