ಬಳ್ಳಾರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130 ನೇ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಬುಧವಾರ
ಸರಳವಾಗಿ ಆಚರಿಸಲಾಯಿತು.
ನಗರದ ಡಾ.ಅಂಬೇಡ್ಕರ್ ಭವನದ ಮುಂದೆ ಇರುವ
ಭಾರತ ರತ್ನ ಸಂವಿಧಾನಶಿಲ್ಪಿ, ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು.
ಮಹಾಮಾಮವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ
ಪ್ರತಿಮೆಗೆ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ,ಬಿ.ನಾಗೇಂದ್ರ,ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಮುಂಡ್ರಿಗಿ ನಾಗರಾಜ್,ಎ.ಮಾನಯ್ಯ ,ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.
ಮಾಸ್ಕ್ ಇಲ್ಲದರವನ್ನು ಗದರಿದ ಡಿಸಿ: ಜಯಂತಿ ಆಚರಿಸಲು ಬಂದಿದ್ದವರಲ್ಲಿ ಮಾಸ್ಕ್ ಹಾಕದವರನ್ನು ಜಿಲ್ಲಾಧಿಕಾರಿ ಮಾಲಪಾಟಿ ಅವರು ಗದರಿಸಿದ ಪ್ರಸಂಗವೂ ನಡೆಯಿತು.
‘ಮಾಸ್ಕ್ ಹಾಕಿಕೊಂಡು ಒಳಗೆ ಬನ್ನಿ, ಇದು ನಿಮ್ಮ ಒಳ್ಳೆಯದಕ್ಕಾಗಿ ಹೇಳುತ್ತಿರುವುದು, ಮಾಸ್ಕ್ ಇಲ್ಲದೆ ಯಾರೂ ಹತ್ತಿರ ಬರಬೇಡಿ ಎಂದರು.
*****