ಬಳ್ಳಾರಿ: ಕೋವಿಡ್ ಕೇರ್ ಸೆಂಟರ್ ಗಳಿಗೆ ಡಿಸಿ, ಸಿಇಓ ಭೇಟಿ:ಪರಿಶೀಲನೆ

ಬಳ್ಳಾರಿ, ಮೇ 24: ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಹಾಗೂ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಸೋಮವಾರ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಕೊಳಗಲ್, ಯರಂಗಳಿ ಹಾಗೂ ನಗರದ ಮಯೂರ ಹೋಟಲ್ ಹಿಂದುಗಡೆ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿದರು.
ಕೇಂದ್ರಗಳಲ್ಲಿ ದಾಖಲಾಗಿರುವ ಸೊಂಕಿತರಿಗೆ ನೀಡಲಾಗುತ್ತಿರುವ ಊಟ, ವೈದ್ಯಕೀಯ ಚಿಕಿತ್ಸೆ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಮಾಲಪಾಟಿ ಹಾಗೂ ಕೆ.ಆರ್.ನಂದಿನಿ ಅವರು ಪರಿಶೀಲಿಸಿದರಲ್ಲದೇ
ಸೊಂಕಿತರೊಂದಿಗೆ ಸಂವಾದ ನಡೆಸಿ, ಆತ್ಮಸ್ಥೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರೆಹಮಾನ್ ಪಾಶಾ, ತಾಪಂ ಇಒ ಮಡಗಿನ ಬಸಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
*****