ನಾಳೆ(ಜು.೨೫) ಬೆಳಗಾವಿಗೆ ಸಿಎಂ ಯಡಿಯೂರಪ್ಪ ಆಗಮನ

 

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಗೆ ಆಗಮಿಸುವರು.
ಭಾನುವಾರ ಬೆಳಗ್ಗೆ 10.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, 10.30ರಿಂದ 1.30ರ ವರೆಗೆ ಪ್ರವಾಹಪೀಡಿತ ಪ್ರದೇಶ ಮತ್ತು ಸಾಂತ್ವನ ಕೇಂದ್ರಗಳ ಪರಿಶೀಲನೆ ನಡೆಸಲಿದ್ದಾರೆ.
2.30ರಿಂದ ಜಿಲ್ಲೆಯ ಪ್ರವಾಹ ಪರಿಸ್ಥಿತಿ, ಪರಿಹಾರ ಕಾರ್ಯಾಚರಣೆಗಳ ಕುರಿತು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
*****