ಧಾರವಾಡ ರಂಗಾಯಣ ಆಡಳಿತಾಧಿಕಾರಿಯಾಗಿ ಬಸವರಾಜ ಹೂಗಾರ ಅಧಿಕಾರ ಸ್ವೀಕಾರ

ಧಾರವಾಡ, ಜು.30: ಇಲ್ಲಿನ ರಂಗಾಯಣದ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಶುಕ್ರವಾರ ಅಧಿಕಾರವಹಿಸಿಕೊಂಡರು.
ಮೂಲತಃ ಬಾಗಲಕೋಟ ಜಿಲ್ಲೆಯ ಸೀಮೀಕೇರಿ ಗ್ರಾಮದವರಾದ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕೊಪ್ಪಳ,ಮಂಡ್ಯ,ಬಾಗಲಕೋಟ,ಕಾರವಾರ,ಧಾರವಾಡ ,ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ,ಕರ್ನಾಟಕ ಲಲಿತಾ ಕಲಾ ಅಕಾಡೆಮಿ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸಿ ಇದೀಗ ಜಂಟಿ ನಿರ್ದೇಶಕ ಹುದ್ದೆಗೆ ಬಡ್ತಿ ಪಡೆದು ಧಾರವಾಡ ರಂಗಾಯಣ ಆಡಳಿತಾಧಿಕಾರಿ ಹುದ್ದೆಗೆ ನಿಯೋಜಿಸಲ್ಪಟ್ಟಿದ್ದಾರೆ.
ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ್, ರಂಗಸಮಾಜದ ಸದಸ್ಯ, ಹಿರಿಯ ರಂಗ ಕರ್ಮಿ ಸಿದ್ಧರಾಮ ಹಿಪ್ಪರಗಿ ಮತ್ತಿತರರು ಇದ್ದರು.
*****