ಬಳ್ಳಾರಿ,ಜು.31:ಕೋವಿಡ್ ಸಮಯದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಮಾಡಿದ ಮಾನವಿಯ ಸೇವೆಯನ್ನು ಗುರುತಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ರೆಡ್‌ಕ್ರಾಸ್ ಸಂಸ್ಥೆಗೆ ಆ್ಯಂಬುಲೆನ್ಸ್ ದೇಣಿಗೆಯಾಗಿ ನೀಡಲಾಯಿತು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಎಸ್‌ಬಿಐ ಮುಖ್ಯ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆಗೆ ಆ್ಯಬುಲೆನ್ಸ್ ಹಸ್ತಾಂತರಿಸಲಾಯಿತು.
ಎಸ್.ಬಿ.ಐನ ಜಿ.ಎಂ ರವಿರಂಜನ್ ಅವರು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರು ಹಾಗೂ ಬಳ್ಳಾರಿ ಜಿಲ್ಲಾಧಿಕಾರಿಯಾದ ಪವನ್‌ಕುಮಾರ್ ಮಾಲಪಾಟಿ ಅವರಿಗೆ ಆ್ಯಂಬುಲೆನ್ಸ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರವಿರಂಜನ್ ಅವರು, ರೆಡ್‌ಕ್ರಾಸ್ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದ್ದು, ಕೋವಿಡ್ ಸಮಯದಲ್ಲಿ ಅವರು ನಿರ್ವಹಿಸಿದ ಪಾತ್ರ ಶ್ಲಾಘನೀಯ. ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೆಡ್‌ಕ್ರಾಸ್ ಸಂಸ್ಥೆಗೆ ಎಸ್‌ಬಿಐ ವತಿಯಿಂದ ಆ್ಯಂಬ್ಯುಲೆನ್ಸ್ ನೀಡಲಾಗುತ್ತಿದೆ. ರೆಡ್‌ಕ್ರಾಸ್ ಸಂಸ್ಥೆಯ ಸೇವೆ ಹೀಗೆ ನಿರಂತರವಾಗಿ ಸಾಗಲಿ ಎಂದು ಹೇಳಿದರು.
ಎಸ್.ಬಿ.ಐನ ಸೋಮಶೇಖರ್ ಅವರು ವೇದಿಕೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಎಸ್.ಬಿ.ಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಪ್ರದೀಪ್ ನಾಯರ್, ವಿಮ್ಸ್ ನಿರ್ದೇಶಕರು ಹಾಗೂ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಡಾ.ಗಂಗಾಧರ ಗೌಡ, ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ.ಎಸ್.ಜೆ.ವಿ.ಮಹಿಪಾಲ್, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕರಾದ ಲಕ್ಷ್ಮಣ ಸಿಂಹ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ರೆಡ್ ಕ್ರಾಸ್ ರಾಷ್ಟ್ರೀಯ ಮಾನವೀಯ ವೀರನಾಯಕ ಪ್ರಶಸ್ತಿ ಪುರಸ್ಕೃತ ರಕ್ತದಾನಿ ಬ್ಲಡ್ ದೇವಣ್ಣ, ಚಂದ್ರಶೇಖರ್, ಪ್ರೊ. ವೀರೇಶ್ ಹಾಗೂ ಅಶೋಕ್ ಜೈನ್, ಶಮೀಮ್ ಜಕಲಿ, ಮೆಹಬೂಬ್ ಬಾಷಾ, ವಾಸು, ಸಮೀರ್ ಶೇಟ್, ತಾಹೆರ್ ಶೇಟ್, ಶಿವಸಾಗರ್, ರಾಮಕೃಷ್ಣ, ಎಂ.ವಲಿಬಾಷಾ ಮತ್ತು ರೆಡ್‌ಕ್ರಾಸ್ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
*****