ಬಳ್ಳಾರಿ, ಆ. 28: ಮೈಸೂರಿನ ಎಂಬಿಎ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದಲ್ಲಿ ಶುಕ್ರವಾರ ಎಐಡಿಎಸ್ಓ, ಎಐಡಿವೈಓ ಮತ್ತು ಎಐಎಮ್ಎಸ್ಎಸ್ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.
ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸದಸ್ಯರು ಶೀಘ್ರ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
*****