ಕಲಬುರಗಿ, ಸೆ.25: ಸಮಾಜ ಜಾಗೃತಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್) ಪಾತ್ರ ಮಹತ್ವದ್ದು ಎಂದು ಕೃಷಿ ಕಾಲೇಜಿನ ಡೀನ್ ಡಾ. ಸುರೇಶ್ ಎಸ್ ಪಾಟೀಲ್ ಅವರು ಹೇಳಿದರು.
ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನಾ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎನ್.ಎಸ್.ಎಸ್, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗಣರಾಜ್ಯೋತ್ಸವ ಪಥ ಸಂಚಲನ ಹಾಗೂ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಪಾಲ್ಗೊಂಡ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಮಸಿಂಗ್ ಪಿ.ಯು ಕಾಲೇಜಿನ ಪ್ರಾಚಾರ್ಯ ಭಜರಂಗ ಸಿಂಗ್ ಚೌಹಾಣ್, ಡಾ.ಕೆ.ಭವಾನಿ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅಮೃತಾ ಜಿ ಸುಹಾಸ್, ಜಿ.ನಿಂಗಪ್ಪ ದೊರೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತಿತರರು ಭಾಗವಹಿಸಿದ್ದರು.
****