ಸಿಎಂ ಮತ್ತು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಸೌಹಾರ್ದಯುತ ಮಾತುಕತೆ

ಬೆಂಗಳೂರು, ಅ.1: ನಗರದಲ್ಲಿ ಇಂದು(ಶುಕ್ರವಾರ) ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸ್ವಾಮೀಜಿ ಶಾಲು ಹೊದಿಸಿ ಸನ್ಮಾನಿಸಿದರು. ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

*****