ಬಳ್ಳಾರಿಯಲ್ಲಿ ಶ್ರೇಷ್ಠ ಸಮಾಜ ಸುಧಾರಕ‌ ಶ್ರೀ ಕನಕದಾಸ ಜಯಂತಿ ಆಚರಣೆ

ಬಳ್ಳಾರಿ,ನ.22:ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಶ್ರೇಷ್ಠ ಸಮಾಜ ಸುಧಾರಕ‌ ಶ್ರೀ ಕನಕದಾಸರ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ನಗರದ ಕನಕವೃತ್ತದಲ್ಲಿರುವ ಭಕ್ತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರು ಆಗಿರುವ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಯರ್ರೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಸಹಾಯಕ ಆಯುಕ್ತ ಡಾ.
ಆಕಾಶ ಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಸೇರಿದಂತೆ ಮತ್ತಿತರರು ಇದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಭಕ್ತಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಜಯಂತಿ ನಿಮಿತ್ತ ನಡೆದ ಡೊಳ್ಳು ಕುಣಿತ ಗಮನಸೆಳೆಯಿತು.
*****