ಬಳ್ಳಾರಿ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ವೈ ಎಂ ಸತೀಶ್ ನಾಮಪತ್ರ ಸಲ್ಲಿಕೆ

ಬಳ್ಳಾರಿ, ನ.23:  ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವೈ.ಎಂ.ಸತೀಶ‌ ಅವರು ಚುನಾವಣಾಧಿಕಾರಿ ಪವನಕುಮಾರ್ ಮಾಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು.      ಮಂಗಳವಾರ ಬೆಳಿಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರ ಜತೆ ಆಗಮಿಸಿದ ಸತೀಶ್ ಅವರು ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಸಚಿವರಾದ ಬಿ.ಶ್ರೀರಾಮುಲು,ಆನಂದಸಿಂಗ್, ಶಾಸಕರಾದ ಸೋಮಶೇಖರ್ ರೆಡ್ಡಿ, ಸೋಮಲಿಂಗಪ್ಪ ಇದ್ದರು.

*****