ಬೆಂಗಳೂರು, ಜ.26: ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾಸಾಹೇಬ್ ಡಾ.ಬಿ. ಆರ್ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನ ದೇಶದ ಪ್ರತಿಯೊಬ್ಬರಿಗೂ ಸಮಾನತೆ ಹಾಗೂ ಗೌರವದಿಂದ ಬದುಕುವ ಹಕ್ಕನ್ನು ಕಲ್ಪಿಸಿದೆ ಎಂದು ಭಾರತೀಯ ಜೀವ ವಿಮಾ ನಿಗಮದ ಶಾಖಾಧಿಕಾರಿ ಗಾಳೆಪ್ಪ ತಳವಾರ ಅವರು ಹೇಳಿದರು.
ಅವರು ಬುಧವಾರ ರೆಸಿಡೆನ್ಸಿ ಶಾಖೆ ಆಯೋಜಿಸಿದ್ದ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಶೋಷಿತರು, ಹಿಂದುಳಿದವರು ಹಾಗೂ ಮಹಿಳೆಯರಿಗೂ ಸಮಾನತೆಯ ಹಕ್ಕು ಕಲ್ಪಿಸಿರುವುದರಿಂದ ಪ್ರಸ್ತುತ ಎಲ್ಲಾ ರಂಗಗಳಲ್ಲೂ ಉತ್ತಮ ಸಾಧನೆ ತೋರಲು ಸಾಧ್ಯವಾಗಿದೆ ಎಂದು ತಿಳಿಸಿದರು.
ದೇಶದ ಪ್ರಜೆಗಳು ಮೂಲಭೂತ ಹಕ್ಕುಗಳ ಜತೆ ಮೂಲಭೂತ ಕರ್ತವ್ಯಗಳನ್ನು ಅರ್ಥಮಾಡಿಕೊಂಡು ದೇಶದ ಪ್ರಗತಿಗೆ ಕೈ ಜೋಡಿಸುವ ಅಗತ್ಯವಿದೆ ಎಂದರು.
ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ತೋರಿದ ಅಭಿವೃದ್ಧಿ ಅಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ರಿಚ್ ಮಂಡ್ ಶಾಖೆಯ ಶಾಖಾಧಿಕಾರಿ ಶ್ರೀಮತಿ ಅರುಲ್ ಸೆಲ್ವಿ, ಉಪ ಶಾಖಾಧಿಕಾರಿ ರಮೇಶ್
ಉಪಸ್ಥಿತರಿದ್ದರು
ಶಾಖೆಯ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.
*****