ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಶ್ರೇಷ್ಠ ಆರ್ಥಿಕ ತಜ್ಞರು -ವಿಕ್ಟರ್ ಇಮ್ಯಾನ್ಯುಯಲ್

ಬಳ್ಳಾರಿ, ಫೆ.2: ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರು ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು ವಾರ್ಡ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಕ್ಟರ್ ಇಮ್ಯಾನ್ಯುಯಲ್ ಹೇಳಿದರು.
ನಗರದ ವಾರ್ಡ್ಲಾ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರ್ ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು. ಶಿಕ್ಷಣದ ಮಹತ್ವವನ್ನು ಸಮಾಜಕ್ಕೆ ತಿಳಿಸಿದ ಮಹಾ ನಾಯಕ ಎಂದು ಕೊಂಡಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಬಾರಿ ಪ್ರಾಂಶುಪಾಲ ಕೆ. ಶಬ್ಬೀರ್ ಅಹ್ಮದ್ ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರ ಜೀವನ ಬಡವರು, ಶೋಷಿತರು, ನೊಂದು ಬೆಂದವರಿಗೆ ಸ್ಪೂರ್ತಿ. ಬಾಬಾ ಸಾಹೇಬರು ಎಂತಹ ಪರಿಸ್ಥಿತಿಯಲ್ಲೂ ಸೋಲನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸೋಲುಗಳನ್ನು ಗೆಲುವಿನ ಮೆಟ್ಟಿಲುಗಳನ್ನಾಗಿ ಮಾಡಿ ಕೊಂಡು ಮಹಾನಾಯಕರಾದರು. ಶಿಕ್ಷಣದಿಂದ ಜೀವನದಲ್ಲಿ ಎಲ್ಲವನ್ನೂ ಗೆಲ್ಲಲು ಸಾಧ್ಯ ಎಂಬುದನ್ನು ನಿರೂಪಿಸಿದ ಮಹಾನುಭಾವರು ಎಂದರು.


ವಿಶೇಷ ಉಪನ್ಯಾಸವನ್ನು ನೀಡಿದ ಕನ್ನಡ ಉಪನ್ಯಾಸಕಿ ಡಾ. ಸುಮ ವೈ ಇವರು ಡಾ.ಅಂಬೇಡ್ಕರ್ ಅವರು ಜೀವನದಲ್ಲಿ ಅನುಭವಿಸಿದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮನ ಮುಟ್ಟುವಂತೆ ತಿಳಿಸಿದರು. ಡಾ. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಹೇಳಿದರು.
ವಿಜಯ ಭಾಸ್ಕರ್, ಕೆ ಹನುಮೇಶ ಅವರು ಡಾ ಅಂಬೇಡ್ಕರ್ ಅವರು ಭಾರತೀಯ‌ ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಜಮೀರುನ್ ಬೇಗಂ, ಗೌತಮಿ, ಮಾಧವಿ, ಗ್ಲಾಡೀಸ್, ಅನಿಲ್ ದಯಾನ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ರೋಜಾ ಬಾಯಿ ಸ್ವಾಗತಿಸಿದರು. ಸಂಧ್ಯಾ ವಂದಿಸಿದರು.  ಅಂಕಿತಾ ನಿರೂಪಿಸಿದರು. ಹುಸೇನ್ ಬಾಷ ನಿರ್ವಹಿಸಿದರು.

*****