ಬಳ್ಳಾರಿ, ಜೂ.10: ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಯೊಂದಿಗೆ ಅಧ್ಯಯನ ಶೀಲರಾದರೆ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಡಿಡಿಪಿಐ ಅಂದಾನಪ್ಪ ಎಂ ವಡಗೇರಿ ಅವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪೂರ್ವ ವಲಯ ಬಳ್ಳಾರಿ, ತಾಲೂಕು ಶಿಕ್ಷಣಾಧಿಕಾರಿಗಳ ಸಂಘ, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ತಾಲೂಕು ಸಹ ಶಿಕ್ಷಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಎಂ.ಬಿ.ಎಸ್.ಎಲ್.ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಓದಿದ ವಿಷಯಗಳನ್ನು ಚೆನ್ನಾಗಿ ನೆನಪಿನಲ್ಲಿಟ್ಟುಕೊಂಡು ಪರೀಕ್ಷೆ ಬರೆದರೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗ ಬಹುದು ಎಂದು ತಿಳಿಸಿದರು.
ಮುಖ್ಯ ಗುರುಗಳಿಗೆ ಗೌರವ: ಬಳ್ಳಾರಿ ತಾಲೂಕಿಗೆ ಶೇ. 100 ರಷ್ಟು ಫಲಿತಾಂಶ ಪಡೆದ ಶಂಕರ ಗೌಡ ಮು.ಶಿ. ಶ್ರೀ ಧರಗಡ್ಡೆ, ಸುರೇಶ್ .ಮು.ಗು. ಹೊಸಯರಗುಡಿ ಹಾಗೂ ಸೇವೆಯಿಂದ ವಯೋ ನಿವೃತ್ತಿಯಾದ ಬಾಣಾಪುರ. ಸರ್ಕಾರಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸವಿತಾ ಕುಮಾರಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪೂರ್ವ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ.ಸಿದ್ದಲಿಂಗ ಮೂರ್ತಿ, ಜಿಲ್ಲಾ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ವೀರನಗೌಡ ಗೌಡರ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವನ ನಾಯ್ಕ, ಕಾರ್ಯದರ್ಶಿ ರೇವಣ ಸಿದ್ಧಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಎಂ.ಬಿ.ಎಸ್.ಎಲ್.ಪ್ರೌಢಶಾಲೆ ಮಕ್ಕಳು ಪ್ರಾರ್ಥಿಸಿದರು. ಶಿಕ್ಷಣ ಸಂಯೋಜಕ ಗೂಳೆಪ್ಪ ಬೆಳ್ಳೇಕಟ್ಟೆ ಅವರು ನಿರೂಪಿಸಿದರು.
2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತಾಲೂಕಿಗೆ ಪ್ರಥಮ ‘ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಕನ್ನಡ , ಆಂಗ್ಲ, ಉರ್ದು ಮತ್ತು ತೆಲುಗು ಮಾದ್ಯಮದ ವಿದ್ಯಾರ್ಥಿಗಳನ್ನು ಡಿಡಿಪಿಐ ಅವರು ಅಬಿನಂಧಿಸಿ ಸತ್ಕರಿಸಿದರು.
ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ತೃತೀಯ ಸ್ಥಾನ ಪಡೆದ ತೆಲುಗು, ಉರ್ದು ಮಾದ್ಯಮದ ವಿದ್ಯಾರ್ಥಿಗಳಿಗೆ ಡಿಡಿಪಿಐ ಅವರು ವೈಯಕ್ತಿಕವಾಗಿ ಬಹುಮಾನ ನೀಡಿ ಅಬಿನಂಧಿಸುವ ಮೂಲಕ ಪ್ರೋತ್ಸಾಹಿಸಿದರು.
*****