ಶೂನ್ಯದಿಂದ ಏನನ್ನೂ ಸೃಷ್ಟಿಸಲಾಗದು -ವಿಚಾರವಾದಿ ಸಾಹಿತಿ ಡಾ. ವೆಂಕಟಯ್ಯ ಅಪ್ಪಗೆರೆ

ಬಳ್ಳಾರಿ, ಆ.25: ಶೂನ್ಯದಿಂದ ಏನನ್ನೂ ಸೃಷ್ಟಿಸಲಾಗದು ಎಂದು ವಿಚಾರವಾದಿ ಹಿರಿಯ ಸಾಹಿತಿ ಡಾ.ವೆಂಕಟಯ್ಯ ಅಪ್ಪಗೆರೆ ಅವರು ಹೇಳಿದರು.
ನಗರದ ಜೆಟಿಎಸ್ ಕಾಲೇಜಿನಲ್ಲಿ ಕೆಜೆವಿಎಸ್ ಬಳ್ಳಾರಿ ಜಿಲ್ಲಾ ಘಟಕ ಆಯೋಜಿಸಿದ್ದ ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ ಕಾರ್ಯಕ್ರಮವನ್ನು ಖ್ಯಾತ ವಿಚಾರವಾದಿ ದಿ. ಡಾ.ನರೇಂದ್ರ ದಾಬೋಲ್ಕರ್ ಅವರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮೂಢನಂಬಿಕೆ, ಕಂದಾಚಾರಗಳನ್ನು ನಂಬಬಾರದು.
ಅಕ್ಷರಸ್ಥ ಕಂದಾಚಾರಿ ಅನಕ್ಷರಸ್ಥ ಕಂದಾಚಾರಿಗಿಂತ ಹೆಚ್ಚು ಅಪಾಯಕಾರಿ ಎಂದು ಪ್ರತಿಪಾದಿಸಿದರು.
ಹಿರಿಯ ಸಾಹಿತಿ, ದಾನಿ ಸದಸ್ಯ ಟಿ.ಕೆ.ಗಂಗಾಧರ ಪತ್ತಾರ ಅವರು ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಹಾಗೂ ಸಂವಾದ ಅರ್ಥಪೂರ್ಣವಾಗಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಬೆಳಗಲ್ ಪ್ರಕಾಶ್ ಅವರು ವಹಿಸಿದ್ದರು. ವಿಜ್ಞಾನ ಉಪನ್ಯಾಸಕಿ ದುರ್ಗಮ್ಮ ಕಾರ್ಯಕ್ರಮ ನಿರೂಪಿಸಿದರು. ಸುಮಾರು 200 ವಿದ್ಯಾರ್ಥಿಗಳು, ಅಧ್ಯಾಪಕ, ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
*****