ಬೆಂಗಳೂರು, ಅ.7: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಜರುಗಿತು.
ಮಾಜಿ ಮುಖ್ಯಮಂತ್ರಿ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಜೆ.ಡಿ.ಎಸ್. ಪಕ್ಷದ ನಾಯಕರು ಹಾಗೂ
ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಸಚಿವರಾದ ಆರ್.ಅಶೋಕ್, ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಬಿ.ಶ್ರೀ ರಾಮುಲು, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕರಾದ ಯು.ಟಿ. ಖಾದರ್, ಜೆ.ಡಿ.ಎಸ್.ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ, ಅಜಯ್ ಧರ್ಮ ಸಿಂಗ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿದ್ಧರಾಮಯ್ಯ ಬೆಂಬಲ:
ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕೆಂಬ ನಿಲುವಿಗೆ ನಾನು ಈಗಲೂ ಬದ್ಧ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
*****