ಬಳ್ಳಾರಿ, ನ.4: ನವದೆಹಲಿಯ ಕೇಂದ್ರ ಸರಕಾರದ ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರಬಲ್ ಸ್ಟೂಡೆಂಟ್ ಸಂಸ್ಥೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಮೂರನೇ ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ-2022ದಲ್ಲಿ ನಗರದ ಸಂಗೀತ ಶಿಕ್ಷಕ ಕೆ ದೊಡ್ಡಬಸಪ್ಪ ಅವರಿಗೆ ರಾಷ್ಟ್ರಮಟ್ಟದ ಮೊದಲಸ್ಥಾನ ಪಡೆದಿದ್ದಾರೆ.
ದೊಡ್ಡ ಬಸಪ್ಪ ಅವರು ರಾಷ್ಟ್ರಮಟ್ಟದ
ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಬೆಂಗಳೂರಿನ ಹಾರ್ಟ್ ಆಫ್ ಲಿವಿಂಗ್ ಇಂಟರ್ನ್ಯಾಷನಲ್ ಆಶ್ರಮದಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಉತ್ಸವ ನಡೆಯಿತು.
ಜಿಲ್ಲೆಯ ಕೊಳಗಲ್ಲಿನ ಏಕಲವ್ಯ ಮಾದರಿ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ ದೊಡ್ಡಬಸಪ್ಪ ಅವರು ರಾಜ್ಯವನ್ನು ಪ್ರತಿನಿಧಿಸಿದ್ದರು.
ಅಭಿನಂದನೆ: ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತಂದಿರುವ ದೊಡ್ಡಬಸಪ್ಪ ಅವರನ್ನು ಡಾ.ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ್, ವರ್ಣಶ್ರೀ ಪ್ರಶಸ್ತಿ ಪುರಸ್ಕೃತ ಮಂಜುನಾಥ ಗೋವಿಂದವಾಡ ಮತ್ತು
ಹಿರಿಯ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳ್ ಅವರು ಅಭಿನಂದಿಸಿದ್ದಾರೆ.
*****