ಬಳ್ಳಾರಿ, ನ.17: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕರ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಹೇಳಿದರು.
ನಗರದ ಹೀರದ ಸೂಗಮ್ಮ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜರುಗಿದ ಪೂರ್ವ ವಲಯದ ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಸರ್ವತೋಮುಖ ಪ್ರಗತಿಗೆ ಪ್ರತಿಭಾ ಕಾರಂಜಿ ಮೊದಲ ಮೆಟ್ಟಿಲು ಎಂದು ಅಭಿಪ್ರಾಯ ಪಟ್ಟರು.
ವಿವಿಧ ಹಂತಗಳನ್ನು ಜಯಿಸಿ ತಾಲೂಕುಮಟ್ಟದಲ್ಲಿ ಪಾಲ್ಗೊಂಡಿರುವ ಸ್ಪರ್ಧಾಳುಗಳು ಮುಂದಿನ ಹಂತಕ್ಕೆ ತಲುಪುವ ಮೂಲಕ ರಾಜ್ಯ ಮಟ್ಟದಲ್ಲಿ ಬಳ್ಳಾರಿ ಜಿಲ್ಲೆಯ ಕೀರ್ತಿಯನ್ನು ಎತ್ತಿಹಿಡಿಯಬೇಕು ಎಂದು ಹಾರೈಸಿದರು.
ಮಹಾಪೌರರಾದ ಶ್ರೀಮತಿ ರಾಜೇಶ್ವರಿ ಅವರು ಮುಖ್ಯ ಅತಿಥಿಗಳಾಗಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಸಿ ನಿಂಗಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎನ್. ರಮೇಶ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರಿಮಲ್ಲಪ್ಪ ಎಮ್.ಪಿ.ಎಸ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ತಿಪ್ಪಾರೆಡ್ಡಿ.ಜಿ.ವೈ. ಪದಾಧಿಕಾರಿಗಳಾದ ಗಿರೀಶ್,ವೀರೇಶ್,ಹನುಮಂತಪ್ಪ, ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಬಳ್ಳಾರಿ ಪೂರ್ವ ವಲಯದ ಎಲ್ಲಾ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಕ್ಲಸ್ಟರ್ ಹಂತದಿಂದ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಹಾಜರಿದ್ದರು,
ಶಿಕ್ಷಣ ಸಂಯೋಜಕ ಗೂಳೆಪ್ಪ ಬೆಳ್ಳಿಕಟ್ಟಿ ಸ್ವಾಗತಿಸಿದರು. ನಂದೀಶ್ ಮತ್ತು ನೇತ್ರಾವತಿ ನಿರೂಪಿಸಿದರು. ಶಿಕ್ಷಣ ಸಂಯೋಜಕ ಹಿರೇಮಠ ಅವರು ವಂದಿಸಿದರು.
*****