ಬಳ್ಳಾರಿ, ಡಿ.7: ವೀವಿ ಸಂಘದ ನಗರದ ಪ್ರತಿಷ್ಠಿತ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆ ಡಿ. ೧೦ರಂದು ಶನಿವಾರ ಕಾಲೇಜಿನ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಿ.ವಿ. ಬಸವರಾಜ್ ಅವರು ತಿಳಿಸಿದರು.
ಬುಧವಾರ ನಗರದ ಎಸ್.ಜಿ ಜ್ಯೂನಿಯರ್ ಕಾಲೇಜಿನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸುವ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆಯನ್ನು ಉದ್ಘಾಟಿಸುವರು.
ಶ್ರೀ ಕಲ್ಯಾಣ ಸ್ವಾಮಿಗಳು ಘನ ಉಪಸ್ಥಿತಿವಹಿಸಲಿದ್ದು, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್.ಎಂ. ಗುರುಸಿದ್ಧಸ್ವಾಮಿ ಅವರು ಅಧ್ಯಕ್ಷತೆವಹಿಸಲಿದ್ದಾರೆ. ಸಾರಿಗೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಬಿ. ಶ್ರೀರಾಮುಲು ಅವರು ಮುಖ್ಯ ಅತಿಥಿಗಳಾಗಿ `ಅಮೃತ ಸಿರಿ’ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು ಎಂದು ಹೇಳಿದರು.
ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಡಾ. ಎನ್. ತಿಪ್ಪಣ್ಣ ಅವರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾದ್ಯಾಯ ಲಿಂಗೈಕ್ಯ ಮಂಗಾಪುರದ ಚನ್ನಬಸಯ್ಯ ಅವರ `ಬದುಕು ಮತ್ತು ವ್ಯಕ್ತಿತ್ವ’ದ ಕುರಿತು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.
ನಗರ ಶಾಸಕ ಜಿ. ಸೋಮಶೇಖರರೆಡ್ಡಿ, ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಎಂ ಎಲ್ ಸಿ ವೈ.ಎಂ. ಸತೀಶ್, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಜವಳಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರುಪಾಕ್ಷಗೌಡ, ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತ ಎನ್. ರುದ್ರೇಶ್ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು ದ್ದಾರೆ ಎಂದು ಹೇಳಿದರು.
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಹ ಕಾರ್ಯದರ್ಶಿ ದರೂರು ಶಾಂತವೀರನಗೌಡ, ಖಜಾಂಚಿ ಗೋನಾಳ್ ರಾಜಶೇಖರಗೌಡ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಂದಾನಪ್ಪ ಎಂ. ವಡಿಗೇರಿ ಅವರು ವಿಶೇಷ ಆಹ್ವಾನಿತರಾಗಿದ್ದಾರೆ ಎಂದರು.
ಅಮೃತ ಮಹೋತ್ಸವದ ಅಂಗವಾಗಿ ಡಿಸೆಂಬರ್ ೧೦ರ ಶನಿವಾರ ಬೆಳಿಗ್ಗೆ ೭.೩೦ಕ್ಕೆ ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಿಂದ ಕಾಲೇಜಿನ ಆವರಣದವರೆಗೆ ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿ ಮತ್ತು ಸಂಘದ ಆಜೀವ ಸದಸ್ಯರಿಂದ ಮೆರವಣಿಗೆ ನಡೆಯಲಿದೆ ಎಂದರು.
ಸAಜೆ ೫.೩೦ಕ್ಕೆ ನಡೆಯುವ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ವಹಿಸಲಿದ್ದು, ಎಮ್ಮಿಗನೂರು ಹಂಪಿ ಸಾವಿರ ದೇವರ ಸಂಸ್ಥಾನ ಮಠದ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮಿಗಳು ಘನ ಉಪಸ್ಥಿತಿವಹಿಸಲಿದ್ದಾರೆ ಎಂದು ಹೇಳಿದರು.
ವೀರಶೈವ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಅಲ್ಲಂ ಚನ್ನಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅಧಿಕಾರಿ ಎಚ್.ಎಂ. ಶಿವಯೋಗಿ ಹಿರೇಮಠ್ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್. ಸುಗೇಂದ್ರ ಅವರು ಮುಖ್ಯ ಅತಿಥಿಗಳಾಗಿದ್ದಾರೆ ಎಂದರು.
ಸಮಾರೋಪ ಸಮಾರಂಭದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಿ.ವಿ. ಬಸವರಾಜ, ಸಹ ಕಾರ್ಯದರ್ಶಿ ದರೂರು ಶಾಂತವೀರನಗೌಡ, ಖಜಾಂಚಿ ಗೋನಾಳ್ ರಾಜಶೇಖರಗೌಡ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಂದಾನಪ್ಪ ಎಂ. ವಡಿಗೇರಿ ಅವರು ವಿಶೇಷ ಆಹ್ವಾನಿತರಾಗಿದ್ದಾರೆ ಎಂದರು.
ಸುದ್ದಿ ಗೋಷ್ಟಿಯಲ್ಲಿ ಉಪಸ್ಥಿರಿದ್ದ ವೀವಿ ಸಂಘದ ಆದ್ಯಕ್ಷ ಎಚ್.ಎಂ. ಗುರುಸಿದ್ಧಸ್ವಾಮಿ, ಸಹ ಕಾರ್ಯದರ್ಶಿ ದರೂರು ಶಾಂತನಗೌಡ ಮತ್ತು ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಶ್ರೀಮತಿ ಎಂ. ಕಾತ್ಯಾಯಿನಿ ಮರಿದೇವಯ್ಯ ಅವರು ಸಂಘ ಮತ್ತು ಕಾಲೇಜಿನ ಕುರಿತು ಹಲವು ಮಾಹಿತಿ ನೀಡಿದರು.
ಶೆಟ್ರ ಗುರುಶಾಂತಪ್ಪ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಲಿ ಸದಸ್ಯರಾದ ಎ. ಚಂದ್ರಾರೆಡ್ಡಿ, ಕೆ.ಎಂ. ಭೋಗೇಶ್, ಪಿ.ಎಸ್. ಜಗನ್ನಾಥಗೌಡ, ಎಚ್.ಎಂ.ವೀರಭದ್ರಯ್ಯ, ಜಿ. ದಿವಾಕರ್, ಜೆ. ಮಂಜುನಾಥ್, ಎಚ್.ಎಂ. ಮಹೇಂದ್ರ ಕುಮಾರ್, ಐ.ಎಂ.,ಮಹೇಶ್ವರಯ್ಯ, ಪ್ರಾಂಶುಪಾಲ ಶರಣಬಸವರಾಜ, ಉಪ ಪ್ರಾಂಶುಪಾಲ ಬಿ. ಮರಿಯಪ್ಪ ಮತ್ತು ಬೋಧಕವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
******
Post Views: 382