ಬಳ್ಳಾರಿ, ಡಿ.11ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಗೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಈಶ್ವರ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಡಾ
ಬಿ.ಕೆ. ರವಿ ರವರ ಮಾರ್ಗದರ್ಶನದಲ್ಲಿ ಪ್ರಸ್ತುತ ಪೂರ್ಣಾವಧಿಯ (ಪಿಎಚ್.ಡಿ) ಸಂಶೋಧನಾ ವಿದ್ಯಾರ್ಥಿಯಾಗಿ ಅಧ್ಯಯನ ಮಾಡುತ್ತಿದ್ದು, ಈಶ್ವರ್ ಅವರನ್ನು ಪತ್ರಿಕಾ ಕ್ಷೇತ್ರದಿಂದ ಪರಿಗಣಿಸಿದೆ ಎಂದು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಷ್ಟ್ರೀಯ ಅಧ್ಯಕ್ಷ ಡಾ. ಎಸ್. ಪಿ. ಸುಮನಾಕ್ಷರ್ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈಶ್ವರ್ ಅವರು ಹಲವಾರು ವರ್ಷಗಳಿಂದ ತಮ್ಮ ಬರವಣಿಗೆ ಮೂಲಕ ಹಿಂದುಳಿದ ವರ್ಗಗಳ, ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಪ್ರಚುರಪಡಿಸುವಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ.
ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ವಿದ್ಯಾರ್ಥಿ ಪರಿಷತ್ತು ಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಈಶ್ವರ್
ದಲಿತ, ಶೋಷಿತ, ಹಿಂದುಳಿದ, ಅಲ್ಪಸಂಖ್ಯಾತ
ಸಮುದಾಯದಗಳ ಪರವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವುದರ ಮೂಲಕ ಗಮನ ಸೆಳೆದಿದ್ದಾರೆ.
ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಭಾನುವಾರ (ಡಿ. 11)ರಂದು ದೆಹಲಿಯ ಪಂಚ ಶೀಲ ಆಶ್ರಮದಲ್ಲಿ ಆಯೋಜಿಸಿರುವ ಅಕಾಡೆಮಿಯ
37 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಯನ್ನು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಅಭಿನಂದನೆ: 2022 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಗೆ ಆಯ್ಕೆಯಾಗಿರುವ ಯುವ ಸಂಘಟಕ, ಬರಹಗಾರ ಈಶ್ವರ್ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ಮಂಜುನಾಥ್ ಅಭಿನಂದಿಸಿದ್ದಾರೆ.
*****