ಕಲಬುರಗಿ, ಅ. 3- ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 23 ನೇ ವರ್ಷದ `ಅಮ್ಮ ಪ್ರಶಸ್ತಿ’ಗಾಗಿ 2022 ಮತ್ತು 2023 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 22 ವರ್ಷಗಳಿಂದ ನಿರಂತರ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 23 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು. ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಕರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲ್ಯೂಡಿ ಕಚೇರಿ ಹತ್ತಿರ, ಸೇಡಂ-585222 ಕಲಬುರಗಿ ಜಿಲ್ಲೆ. ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9731666052 ಸಂಪರ್ಕಿಸಬಹುದು.