ಕೂಡ್ಲಿಗಿ ತಾಲೂಕು ಕಚೇರಿಗೆ ಕಂದಾಯ ಸಚಿವರ ದಿಢೀರ್ ಭೇಟಿ-ತಹಶೀಲ್ದಾರ್ ತಬ್ಬಿಬ್ಬು!

ಕೂಡ್ಲಿಗಿ, ನ.21: ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಮಂಗಳವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು.


ಆದರೆ, ಸಚಿವರು ಕಚೇರಿಗೆ ಆಗಮಿಸುವ ವಿಚಾರ ತಿಳಿಯದ ಕಿರಿಯ ಅಧಿಕಾರಿಗಳು, ಸಿಬ್ಬಂದಿ ಎಂದಿನಂತೆ 10.45 ಆದರೂ ಕಚೇರಿಗೆ ಹಾಜರಾಗಿರಲಿಲ್ಲ.
ಸ್ವತಃ ತಹಶೀಲ್ದಾರ್ ಸಹ ಕಚೇರಿಗೆ ಆಗಮಿಸಿರಲಿಲ್ಲ. ಹೀಗಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಹಾಜರಾತಿ ಪುಸ್ತಕ ಪರಿಶೀಲಿಸಿ ಎಲ್ಲಾ ಅಧಿಕಾರಿಗಳನ್ನೂ ತರಾಟೆಗೆ ತೆಗೆದುಕೊಂಡರು.


ಈ ವೇಳೆ ದಡಬಡಿಸಿ ಕಚೇರಿಗೆ ದೌಡಾಯಿಸಿದ ತಹಶೀಲ್ದಾರರನ್ನೂ ಸಹ ಸಚಿವರು ತರಾಟೆಗೆ ತೆಗೆದುಕೊಂಡರು. ‌ಒಂದು ಸರ್ಕಾರಿ ಕಚೇರಿಯನ್ನು ನಡೆಸುವುದು ಹೀಗಾ? ಬಡವರ ಕೆಲಸ ಅಂದ್ರೆ ಏಕಿಷ್ಟು ತಾತ್ಸಾರ? ಎಂದು ಕಿಡಿಕಾರಿದರು.
*****