ಮೋಕಾದಲ್ಲಿ ‘ಮಕ್ಕಳಸ್ನೇಹಿ ಗ್ರಾಪಂ’ ಅಭಿಯಾನಕ್ಕೆ ಸಿಈಓ ಚಾಲನೆ

ಬಳ್ಳಾರಿ,: ತಾಲೂಕಿನ ಮೋಕಾ ಗ್ರಾಮದಲ್ಲಿ  “ಗ್ರಾಮ ಪಂಚಾಯತ್ ನಡೆ ಮಹಿಳಾ ಮತ್ತು ಮಕ್ಕಳ ಕಡೆ” ಕಾರ್ಯಕ್ರಮಕ್ಕೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು  ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳ ಸ್ನೇಹಿ ಗ್ರಾಪಂ ಅಭಿಯಾನದ ಅಡಿ ಗ್ರಾಪಂ ನಡೆ ಮಹಿಳಾ ಮತ್ತು ಮಕ್ಕಳ ಕಡೆ ಎಂಬ ವಿಶೇಷ ಕಾರ್ಯಕ್ರಮ ಜಿಲ್ಲೆಯಲ್ಲಿ ಎರಡು ತಿಂಗಳುಗಳ ಕಾಲ ಹಮ್ಮಿಕೊಳ್ಳಲಾಗಿದೆ. ಪ್ರತಿ ಶನಿವಾರ ಈ ಕಾರ್ಯಕ್ರಮ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಪ್ರತಿ ಗ್ರಾಪಂಗೂ ಈ ಕಾರ್ಯಕ್ರಮ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಮಟ್ಟದ ಮತ್ತು ತಾಲೂಕುಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಸಹ ಈ ಅಭಿಯಾನ ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲಕಿಯರ ಬಾಲಮಂದಿರದ ಬಾಲಕಿ ಶ್ರೀದೇವಿ ಅವರು ಎಲ್ಲಾ ಮಕ್ಕಳು ಬಾಲ್ಯವಿವಾಹ, ಬಾಲಕಾರ್ಮಿಕ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮುಂದೆ ಬರಬೇಕು ಹಾಗೂ ಎಲ್ಲರು ಶಿಕ್ಷಣ ಪಡೆದು ಪ್ರತಿಭಾವಂತರಾಗಬೇಕೆಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೈಯದ್ ಚಾಂದ್ ಪಾಶಾ, ತಾಲೂಕು ಪಂಚಾಯಿತಿ ಇಒ ಮಡಗಿನ ಬಸಪ್ಪ, ಬಾಲಕಾಮಿಕ ಯೋಜನಾಧಿಕಾರಿ ಮೌನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧಲಿಂಗಪ್ಪ, ಬಿ.ಆರ್.ಸಿ. ಸಿ.ಆರ್.ಪಿ., ಪಿ.ಡಿ.ಒ.ಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದÀ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಸಂಯೋಜಕರು/ಸಿಬ್ಬಂದಿಗಳು,ವಿವಿಧ ಶಾಲೆಗಳ ಮುಖ್ಯ ಗುರುಗಳು, ಅಂಗನವಾಡಿ ಕಾರ್ಯಕತೆರ್Àಯರು, ಆಶಾ ಕಾರ್ಯಕತೆರ್Àಯರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಸೇರಿದಂತೆ ಇತರರು ಇದ್ದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ, ನಿರೂಪಣೆ, ಸ್ವಾಗತ, ವಂದನಾರ್ಪಣೆ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಬಾಲಕಿಯರೇ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.