ಕೂಡ್ಲಿಗಿ(ವಿಜಯನಗರ ಜಿ.), ನ. 29: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಆರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದರು. ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಮನವಿ ನೀಡಿದರು. ಕೃಷಿ ಬೀಜೋತ್ಪಾದನೆ ಕೇಂದ್ರವೂ ಸುಮಾರು 10 ಎಕರೆ ವಿಸ್ತೀರ್ಣದಲ್ಲಿದ್ದೂ, ಇಲ್ಲಿ ಕೃಷಿ ವಿಜ್ಞಾನ ಕೇಂದ್ರ ಪ್ರಾರಂಭಿಸಲು ಅನುಕೂಲವಾದ ಮೂಲಸೌಕರ್ಯ ಇರುವುದಾಗಿ ಸಚಿವರಿಗೆ ಮನವರಿಕೆ ಮಾಡಿದರು. ಈ ಬಗ್ಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವುದಾಗಿ ಕೃಷಿ ಸಚಿವರು ಭರವಸೆ ನಿಡಿದರು.