ಬಸವಕಲ್ಯಾಣ, ಡಿ.5: ಪದವಿಪೂರ್ವ ಶಿಕ್ಷಣ ಇಲಾಖೆ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಲಬುರಗಿ ವಿಭಾಗ ಮಟ್ಟದ ವಿವಿಧ ಸಾಂಸ್ಕೃತಿಕ ಸ್ರರ್ದೆಗಳಲ್ಲಿ ಭಾಗವಹಿಸಿದ ಬಳ್ಳಾರಿ ವೀ.ವಿ ಸಂಘದ ಸ್ವತಂತ್ರ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಗರದ ಬಸವೇಶ್ವರ ಕಾಲೇಜಿನಲ್ಲಿ ಸೋಮವಾರ ಜರುಗಿದ ವಿವಿಧ ಸ್ಪರ್ದೆಗಳಲ್ಲಿ ಕು.ಬಿ.ವಿ ಸಿಂಚನಾ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕು. ತೇಜಸ್ವಿನಿ ಪಾಟೀಲ್ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ .ಕು. ರಬೇಕಾ ಪ್ರಾನ್ಸಿಸ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಏಳುಬೆಂಚಿ ರಾಜಶೇಖರ್, ಸದಸ್ಯರಾದ ಅಣ್ಣಾ ವಿರುಪಾಕ್ಷಪ್ಪ, ಕೆ ಮುದ್ದನಗೌಡ, ಪ್ರಾಚಾರ್ಯ ಡಾ.ಕೆ.ಎಂ ದೇವೇಂದ್ರಯ್ಯ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
—–