ಬಳ್ಳಾರಿ, ಡಿ.3: ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸಂತಶ್ರೇಷ್ಠ ಕವಿ ಭಕ್ತಕನಕದಾಸ ಜಯಂತಿಯನ್ನು ಡಿ.3ರಂದು ಬೆಳಗ್ಗೆ 11.30ಕ್ಕೆ ನಗರದ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಅವರು ತಿಳಿಸಿದ್ದಾರೆ.
ವೇದಿಕೆ ಕಾರ್ಯಕ್ರಮಕ್ಕೂ ಮುಂಚೆ ಬೆಳಗ್ಗೆ 10ಕ್ಕೆ ಅಗ್ನಿಶಾಮಕ ದಳ ಕಚೇರಿ ಎದುರುಗಡೆಯ ಕನಕದಾಸ ಪುತ್ಥಳಿಗೆ ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಮಾಲಾರ್ಪಣೆ ಮಾಡಲಿದ್ದಾರೆ.
ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಚಾಲನೆ ನೀಡಲಿದ್ದು,ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೈ.ದೇವೇಂದ್ರಪ್ಪ,ಜಿ.ಎಂ.ಸಿದ್ದೇಶ್ವರ,ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ,ಬಿ.ನಾಗೇಂದ್ರ,ಪಿ.ಟಿ.ಪರಮೇಶ್ವರ ನಾಯಕ,ಎನ್.ವೈ.ಗೋಪಾಲಕೃಷ್ಣ,ಭೀಮಾನಾಯ್ಕ,ಕೆ.ಸಿ.ಕೊಂಡಯ್ಯ,ಅಲ್ಲಂವೀರಭದ್ರಪ್ಪ,ಜಿ.ಕರುಣಾಕರರೆಡ್ಡಿ,ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ,ಎಸ್.ವಿ.ರಾಮಚಂದ್ರಪ್ಪ ಡಾ.ಚಂದ್ರಶೇಖರ ಪಾಟೀಲ್, ಶಶೀಲ್ ಜಿ.ನಮೋಶಿ,ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ,ಬುಡಾ ಅಧ್ಯಕ್ಷ ದಮ್ಮೂರು ಶೇಖರ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎರ್ರಿಗೌಡ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ವಿಮ್ಸ್ ನೇತ್ರ ತಜ್ಞ ಡಾ.ಪರಸಪ್ಪ ಬಂದ್ರಕಳ್ಳಿ ಅವರನ್ನು ಸನ್ಮಾನಿಸಲಾಗುತ್ತದೆ. ನಿವೃತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ತರಸಾಲಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ದೊಡ್ಡಬಸವ ಗವಾಯಿಗಳು ಕನಕದಾಸರ ಕೀರ್ತನೆಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಉಪಸ್ಥಿತರಿರಲಿದ್ದಾರೆ ಎಂದು ಸಿದ್ದಲಿಂಗೇಶ ರಂಗಣ್ಣವರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.