ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ -ಪ್ರಾಂಶುಪಾಲ ಡಾ. ಹೆಚ್.ಕೆ ಮಂಜುನಾಥ್ ರೆಡ್ಡಿ

ಬಳ್ಳಾರಿ, ಜ.26: ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಟ ಸಂವಿಧಾನವಾಗಿದೆ ಎಂದು ಎಸ್.ಎಸ್.ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಹೆಚ್.ಕೆ. ಮಂಜುನಾಥ್ ಅವರು ಹೇಳಿದರು.
ನಗರದ ಎಸ್.ಎಸ್.ಎ(ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್) ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ
75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಂವಿಧಾನ ರಚನೆಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ,ಡಾ.‌ಬಿ. ಆರ್. ಅಂಬೇಡ್ಕರ್ ಅವರ ಪರಿಶ್ರಮ, ಕೊಡುಗೆ ಅನನ್ಯ ಎಂದು ಕೊಂಡಾಡಿದರು.
ಇತಿಹಾಸ ವಿಭಾಗದ ಸಹ ಪ್ರಾಧ್ಯಪಕ ಪ್ರೊ. ರಾಮಾಂಜನೇಯ ಅವರು ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್ ರಚನೆಯ ಸಂವಿಧಾನ ದೇಶದ ಎಲ್ಲಾ ಪ್ರಜೆಗಳಿಗೆ ನ್ಯಾಯ, ಸಮಾನತೆ ಕಲ್ಪಿಸಿದೆ ಎಂದರು.
ಅತ್ಯಂತ ಸ್ವಾಭಿಮಾನಿಗಳಾಗಿದ್ದ ವಿಶ್ವಜ್ಞಾನಿ ಡಾ. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಗಣರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ
ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್‌ ಮತ್ತು ರೇಂಜರ್‌, ರೆಡ್ ಕ್ರಾಸ್, ನಾಟಕ ವಿಭಾಗ, ಸಾಂಸ್ಕೃತಿಕ ಸಮಿತಿಯ ವಿದ್ಯಾರ್ಥಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಭೋದಕೇತರ ಸಿಬ್ಬಂದಿಗಳು ಇದ್ದರು.

(ವರದಿ :ಮಹೇಶ ಡಿ ಎನ್, 5ನೇ ಸೆಮಿಸ್ಟರ್, ಪತ್ರಿಕೋದ್ಯಮ ವಿಭಾಗ, ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜು (ಸ್ವಾಯುತ), ಬಳ್ಳಾರಿ
—–