ಬಳ್ಳಾರಿ, ಮಾ.6: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನದ ವಿಭಾಗದ ಪ್ರಾಧ್ಯಾಪಕ ಪ್ರೊ ಕೆ ಎಂ ಮೇತ್ರಿ ಅವರು ಅಧಿಕಾರ ವಹಿಸಿಕೊಂಡರು.
ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಡಾ. ಮೇತ್ರಿ ಅವರನ್ನು ನಾಲ್ಕು ವರ್ಷಗಳ ಅವಧಿಗೆ ವಿ.ಎಸ್.ಕೆ. ವಿವಿಯ ಕುಲಪತಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.
ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ್ ಬಿ. ಮಲಶೆಟ್ಟಿ ಅವರು ನೂತನ ಕುಲಪತಿಗಳಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವ ಎಸ್ ಎನ್ ರುದ್ರೇಶ್, ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್ ಓಲೇಕಾರ್, ಹಣಕಾಸು ಅಧಿಕಾರಿ ಪ್ರೊ. ಸದ್ಯೋಜಾತಪ್ಪ, ಸಹಾಯಕ ಕುಲಸಚಿವ ಡಾ. ವೀರೇಂದ್ರ ಕುಮಾರ್, ಕುಲಪತಿಗಳ ಧರ್ಮಪತ್ನಿ ದ್ರಾಕ್ಷಾಯಿಣಿ ಮೇತ್ರಿ, ಪುತ್ರಿ ಸಹನಾ ಮೇತ್ರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಹ, ಸಹಾಯಕ ಪ್ರಾಧ್ಯಾಪಕರು ಮತ್ತಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸನ್ಮಾನ: ಇದೇ ಸಂದರ್ಭದಲ್ಲಿ ಗುಲ್ಬರ್ಗಾ ವಿವಿಯ ಮಾಜಿ ಸೆನೆಟ್ ಸದಸ್ಯ, ಕರ್ನಾಟಕ ಜಾನಪದ ಪರಿಷತ್ತು, ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಾ. ಅಶ್ವರಾಮು ನೂತನ ಕುಲಪತಿ ಡಾ. ಮೇತ್ರಿ ಅವರನ್ನು ಸನ್ಮಾನಿಸಿ ಗೌರವಿಸಿದರು.
——