ಅನುದಿನ ಕವನ-೧೧೯೫, ರಾಷ್ಟ್ರಕವಿ ಕುವೆಂಪು

🍀💐ಉಗಾದಿ ಹಬ್ಬದ ಶುಭಾಶಯಗಳು🍀💐

ತೊಲಗಲಿ ದುಃಖ, ತೊಲಗಲಿ ಮತ್ಸರ,
ಪ್ರೇಮಕೆ ಮೀಸಲು ನವ ಸಂವತ್ಸರ !
ನಮ್ಮೆದೆಯಲ್ಲಿದೆ ಸುಖನಿಧಿ ಎಂದು
ಹೊಸ ಹೂಣಿಕೆಯನು ತೊಡಗಿಂದು!

ಮಾವಿನ ಬೇವಿನ ತೋರಣ ಕಟ್ಟು,
ಬೇವುಬೆಲ್ಲಗಳನೊಟ್ಟಿಗೆ ಕುಟ್ಟು!
ಜೀವನವೆಲ್ಲಾ ಬೇವೂಬೆಲ್ಲ;
ಎರಡೂ ಸವಿವನೆ ಕಲಿ ಮಲ್ಲ!

ಹೊಸ ಮರದಲಿ ಹೂ ತುಂಬಿದೆ ನೋಡು!
ಆಲಿಸು! ಜೇನಿನ ಹಬ್ಬದ ಹಾಡು!
ಜೀವನವೆಂಬುದು ಹೂವಿನ ಬೀಡು;
ಕವಿಯದೆ ಹೆಚ್ಚೇನಿನ ಗೂಡು!

-ರಾಷ್ಟ್ರಕವಿ ಕುವೆಂಪು