ಬಳ್ಳಾರಿ ಲೋಕಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ -ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಏ.25: ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ  ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ ಅವರಿಗೆ ಕೈ ಚಿಹ್ನೆ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ವಾಲ್ಮೀಕಿ ಕೃಷ್ಣಪ್ಪ ಅವರಿಗೆ ಆನೆ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ಶ್ರೀರಾಮುಲು ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ.
ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಸಿ.ಚನ್ನವೀರ ಅವರಿಗೆ ಬ್ಯಾಟರಿ ಟಾರ್ಚ್ ಚಿಹ್ನೆ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್ ಅವರಿಗೆ ಆಟೋ ರಿಕ್ಷಾ ಚಿಹ್ನೆ, ಪ್ರಹರ್ ಜನಶಕ್ತಿ ಪಾರ್ಟಿಯ ಅಭ್ಯರ್ಥಿ ಮಂಜುನಾಥ ಗೋಸಲ ಅವರಿಗೆ ಕಬ್ಬು ರೈತ, ನವಭಾರತ ಸೇನಾ ಪಕ್ಷದ ಅಭ್ಯರ್ಥಿ ಜಿ.ಸ್ವಾಮಿ ಅವರಿಗೆ ಟಿಲ್ಲರ್ ಚಿಹ್ನೆ ನೀಡಲಾಗಿದೆ.
ಪಕ್ಷೇತರ ಅಭ್ಯರ್ಥಿಗಳಾದ ಅರುಣ್.ಎಸ್.ಹಿರೇಹಾಳ್ ಅವರಿಗೆ ಲ್ಯಾಪ್ ಟಾಪ್ ಚಿಹ್ನೆ, ಕಂಡಕ್ಟರ್ ಪಂಪಾಪತಿ ಅವರಿಗೆ ಸೀಟಿ (ವ್ಹಿಜಲ್), ವೀರೇಶ ಅವರಿಗೆ ಪ್ರೆಷರ್ ಕುಕ್ಕರ್ ಚಿಹ್ನೆಗಳನ್ನು ಹಂಚಿಕೆ ಮಾಡಲಾಗಿದ್ದು, ಮೇ 07 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
——–