ಅಳವಂಡಿ: ವಿದ್ಯಾರ್ಥಿಗಳು ಉನ್ನತ ಗುರಿಯನ್ನು ಇಟ್ಟುಕೊಂಡು ಆ ಗುರಿಯನ್ನು ತಲುಪುವ ಕಡೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಕೊಪ್ಪಳದ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಬಸವರಾಜ್ ಹುಣಸಿ ಅವರು ಹೇಳಿದರು. ಗ್ರಾಮದ ಶ್ರೀ ಶಿವಮೂರ್ತಿ ಸ್ವಾಮಿ ಇನಾಮದಾರ ಕಟ್ಟಿಮನಿ ಹಿರೇಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹೊಸ ಕೋರ್ಸ್ ಗಳನ್ನು ಆಯ್ಕೆಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಬೇಕು. ವಿದ್ಯಾರ್ಥಿಗಳ ಜೀವನದಲ್ಲಿ ಸೊಲಾಗಿದೆ ಎಂದು ಯೋಚಿಸದೆ ಸಾಧನೆ ಮಾಡುವಕಡೆ ಹೆಚ್ಚಿನ ಗಮನ ಹರಿಸಬೇಕು ಅಲ್ಲದೇ ವಿದ್ಯಾರ್ಥಿಗಳ ಜೀವನದಲ್ಲಿ ಗುರುಗಳ ಪಾತ್ರ ಬಹು ಮುಖ್ಯವಾಗಿರುತ್ತದೆ. ಗುರುಗಳ ಮಾರ್ಗದರ್ಶನದಲ್ಲಿ ಗುರಿಸಾಧಿಸುವಕಡೆ ಗಮನ ಹರಿಸಬೇಕು ಎಂದರು. ಕಾಲೇಜಿನ ಪ್ರಾಚಾರ್ಯ ಡಾ. ಗವಿಸಿದ್ದಪ್ಪ ಮುತ್ತಾಳ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳು ಮುಂದಿನ ಉನ್ನತ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಅಲ್ಲದೆ ವಿದ್ಯಾರ್ಥಿಗಳು ಆರೋಗ್ಯದ ಕಡೆ ಕಾಳಜಿ ವಹಿಸಬೇಕು ಹಾಗೂ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡು ಕಾಲೇಜಿಗೆ , ಗ್ರಾಮಕ್ಕೆ ಮಾದರಿಯಾಗಬೇಕು ಅಲ್ಲದೇ ಬದಲಾವಣೆ ಎನ್ನುವುದು ಶಿಕ್ಷಣದಿಂದ ಮಾತ್ರ ಸಾಧ್ಯ ಹಾಗಾಗಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು. ಕಾಲೇಜು ಅಭಿವೃದ್ಧಿ ಸಮಿತಿಯ ನಿಕಟ ಪೂರ್ವ ಸದಸ್ಯ ಎ.ಟಿ ಕಲ್ಮಟ್ ರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇತ್ತೀಚಿಗೆ ಮೊಬೈಲ್ ಗೀಳು ಹೆಚ್ಚಾಗಿದೆ. ಮೊಬೈಲ್ ಕಡೆ ಹೆಚ್ಚು ಗಮನ ಹರಿಸದೆ ವಿದ್ಯಾಭ್ಯಾಸದ ಕಡೆ ಹೆಚ್ಚೆಚ್ಚು ಆಸಕ್ತಿತೋರಿ ಉನ್ನತ ಹುದ್ದೆಯತ್ತ ಗುರಿ ಇಟ್ಟುಕೊಂಡು ಆ ಗುರಿಯನ್ನು ಸಾಧಿಸುವಕಡೆ ವಿದ್ಯಾರ್ಥಿಗಳ ಪ್ರಯತ್ನ ಇರಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಬಸವ ರೆಡ್ಡೆಪ್ಪ ಅಳ್ಳಿಕೆರೆ ಮಾತನಾಡಿ, ಶಿಕ್ಷಣ ಪಡೆದಿರುವವರೆ ಶ್ರೀಮಂತರು ಎನ್ನುವುದು ನೆನಪಿರಲಿ ಎಂದರು. ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿ ಗ್ರಾಮದ ಹೆಸರು ರಾಷ್ಟ್ರಮಟ್ಟಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿಜಯನಗರ ಜಿಲ್ಲಾಖಜಾನೆ ಅಧಿಕಾರಿ ಅಂಜಿನಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ. ಅದೇ ಸಮಯವನ್ನು ಜ್ಞಾನವನ್ನು ಹೆಚ್ಚಿಸುವಕಡೆ ಮೀಸಲಿಟ್ಟು ಜೀವನದಲ್ಲಿ ಅಭಿವೃದ್ಧಿಯನ್ನು ಕಾಣಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚಿನ ಆಸಕ್ತಿ ತೋರಿ ಕಠಿಣ ಪರಿಶ್ರಮದಿಂದ ಉನ್ನತ ಹುದ್ದೆ ಅಲಂಕರಿಸುವ ಕಡೆ ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಿಡಿಯ ಪೆಸ್ಟ್ ನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು. ಇದೇ ವೇಳೆ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇಂಗ್ಲೀಷ್ ಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ್, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ನಾಗೇಂದ್ರಪ್ಪ, ವಾಣಿಜ್ಯ ವಿಭಾಗದ ಮುಖ್ಯಸ್ಥ ಜಗದೀಶ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಇಮಾಮ್ ಸಾಬ್, ಹಾಗೂ ಕಾಲೇಜು ಅಬಿವೃದ್ಧಿ ಸಮಿತಿಯ ಸದಸ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.