ಬೆಂಗಳೂರು, ಅ.28: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡಲು ಏಕಸದಸ್ಯ ಆಯೋಗ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಸಭೆಯ ಬಳಿಕ ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು ಸಚಿವ ಸಂಪುಟ ಸಭೆಯ ನಿರ್ಣಯಗಳನ್ನು ಸುದ್ದಿಗಾರರಿಗೆ ತಿಳಿಸಿದರು.
ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸರ್ಕಾರವು ಆಯೋಗವೊಂದನ್ನು ರಚನೆ ಮಾಡಲಿದ್ದು, ಈ ಆಯೋಗವು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸುದ್ದಿಗೋಷ್ಟಿಯಲ್ಲಿ ಸಚಿವರಾದ ಡಾ. ಹೆಚ್ ಸಿ. ಮಹಾದೇವಪ್ಪ, ಕೆ. ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಮಾಜಿ ಸಚಿವ ಹೆಚ್. ಆಂಜನೇಯ, ರಾಜ್ಯಸಭೆಯ ಮಾಜಿ ಸದಸ್ಯ ಡಾ. ಎಲ್. ಹನುಮಂತಯ್ಯ ಮತ್ತಿತರರು ಇದ್ದರು.
—–