ಬಳ್ಳಾರಿ, ನ.26: ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಎಸ್ ಎಸ್ ಎ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೊನಿಕಾ ರಂಜನ್ ಅವರು ತಿಳಿಸಿದರು.
ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ
ಭಾರತೀಯರು ಸದಾ ಕೃತಜ್ಞರಾಗಿರಬೇಕು. ಬಾಬಾಸಾಹೇಬರಿಗೆ ಕೋಟಿ ನಮನಗಳು ಎಂದರು.
ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ಅವರು ವಿವಿಧ ಕಾರಣಗಳಿಂದ ಸಂವಿಧಾನ ಕರಡು ಸಮಿತಿಯ ಸದಸ್ಯರು ಸಭೆಗಳಿಗೆ ಗೈರಾಗುತ್ತಿದ್ದರೂ ಡಾ. ಬಿ ಆರ್ ಅಂಬೇಡ್ಕರ್ ಅವರು ಒಬ್ಬರೇ ಸಂವಿಧಾನ ರಚಿಸಿದರು ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಟಿ ದುರುಗಪ್ಪ ಅವರು ಮಾತನಾಡಿ ಸಂವಿಧಾನದ ಮಹತ್ವ, ಸಂವಿಧಾನ ರಚನೆಯಲ್ಲಿ ಬಾಬಾಸಾಹೇಬರ ಪಾತ್ರವನ್ನು ಮನಮುಟ್ಟುವಂತೆ ವಿವರಿಸಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸೋಮನಾಥ ಸಿ ಎಚ್. ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರಸ್ತಾವನೆಯನ್ನು ಭೋದಿಸಲಾಯಿತು.
ಇತಿಹಾಸ ಉಪನ್ಯಾಸಕ ರಫಿ ಶಿಡಗಿನಮೊಳ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಕೆ. ಬಸಪ್ಪ ನಿರೂಪಿಸಿದರು. ಶ್ರೀನಿವಾಸ ವಂದಿಸಿದರು.
——